
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಬೆಳಿಗ್ಗೆ ಎಸ್‌ಎಸ್‌ಎಲ್‌ಸಿ ರಾಜ್ಯ ಟಾಪರ್ ಅನುಷ್ ಎ.ಎಲ್ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು.
ಈ ವೇಳೆ ಅವರೊಂದಿಗೆ ಶಾಸಕ ಎಸ್.ಅಂಗಾರ, ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ತಾಲೂಕು ಅಧ್ಯಕ್ಷ ಹರೀಶ್ ಕಂಜಿಪಿಲಿ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೃಷ್ಣ ಶೆಟ್ಟಿ ಕಡಬ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುಬ್ರಹ್ಮಣ್ಯ ಕುಳ, ರಮಾನಂದ ಎಣ್ಣೆಮಜಲು, ವಿನೋದ್ ಬೊಳ್ಮಲೆ, ಅನುಷ್ ತಂದೆ ಲೋಕೇಶ್ ಎಣ್ಣೆಮಜಲು, ತಾಯಿ ಉಷಾ, ಮತ್ತಿತರರು ಉಪಸ್ಥಿತರಿದ್ದರು.