ಸಾಮಾಜಿಕ ವ್ಯವಸ್ಥೆಯು ಹಳಿ ತಪ್ಪದಿರಲು ಯುವಜನತೆ ರಾಮನ ಆದರ್ಶ ಕೃಷ್ಣನ ಸಂದೇಶಗಳನ್ನು ಪಾಲಿಸುವಲ್ಲಿ ಯುವಕರು ಮುಂದಡಿಯಿಡಬೇಕು. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸದ್ಗುಣಗಳನ್ನು ಮೈಗೂಡಿಸಿಕೊಂಡ ಯುವಕರ ದಂಡು ಕಾರ್ಯಪ್ರವೃತ್ತರಾಗಬೇಕಿದೆ. ಆ ನಿಟ್ಟಿನಲ್ಲಿ ಭಾವೈಕ್ಯ ಯುವಕ ಮಂಡಲವು ಒಂದು ಹೆಜ್ಜೆ ಮುಂದೆ ಇಟ್ಟಿರುವುದು ಯುವ ಸಮುದಾಯಕ್ಕೆ ಮಾದರಿಯಾಗಿದೆ ಎಂದು ಬೆಳ್ಳಾರೆ ಪೋಲೀಸ್ ಠಾಣೆಯ ಉಪನಿರೀಕ್ಷಕರಾದ ಶ್ರೀ ಆಂಜನೇಯ ರೆಡ್ಡಿಯವರು ಹೇಳಿದರು. ಅವರು ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ ವತಿಯಿಂದ ಹಮ್ಮಿಕೊಳ್ಳಲಾದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ವಹಿಸಿದ್ದರು. ಯುವಕ ಮಂಡಲದ ಕಾರ್ಯದರ್ಶಿ ರಜನೀಶ್ ಪಿ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವೇದಿಕೆಯಲ್ಲಿ ಶ್ರೀ ಜಲದುರ್ಗಾದೇವಿ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ಶ್ರೀ ವೆಂಕಟಕೃಷ್ಣ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದೀಕ್ಷಿತ್ ಆಚಾರ್ಯ ವಂದಿಸಿದರು. ಶಿವಪ್ರಸಾದ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಯುವಕ ಮಂಡಲದ ಸದಸ್ಯರು ಪೆರುವಾಜೆ ಶಾಲಾ ಆವರಣ, ಜಲದುರ್ಗಾದೇವಿ ದೇವಸ್ಥಾನದ ಪರಿಸರ ಮತ್ತು ಮುಖ್ಯರಸ್ತೆಯ ಬದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
- Thursday
- November 21st, 2024