Ad Widget

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ – ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಕೊರೊನಾ ಕಾರಣದಿಂದಾಗಿ ಈ ಬಾರಿಯ ಗಣೇಶೋತ್ಸವ ಆಚರಣೆ ಮಾಡಲು ನಿರ್ಬಂಧ ಹೊರಡಿಸಲಾಗಿತ್ತು. ಮತ್ತೆ ಈಗ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಸಂಘ- ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ.

. . . . . . . . .

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳ ಅನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

. . . . . . .

ಪರಿಷ್ಕೃತ ಮಾರ್ಗಸೂಚಿ ಇಂತಿದೆ:

  1. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು.
  2. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.
  3. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.
  4. ಗಣೇಶೋತ್ಸವದ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಾಣ ಮಾಡಬೇಕು. ಒಮ್ಮೆಲೆ 20 ಕ್ಕಿಂತ ಅಧಿಕ ಜನರು ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.
  5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶವಿಲ್ಲ.
  6. ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
  7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜನೆ ಮಾಡುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪನೆ ಮಾಡುವವರು ಗಣೇಶ ಮೂರ್ತಿಯನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು.

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading