
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಕಾರ್ಯವಾಹರಾಗಿರುವ ನ.ಸೀತಾರಾಮರನ್ನು ಕರ್ನಾಟಕ ದಕ್ಷಿಣ ಪ್ರಾಂತ ಸಹಸೇವಾ ಪ್ರಮುಖ್ ಆಗಿ ಪದೋನ್ನತಿ ಹೊಂದಿದ್ದಾರೆ. ನ.ಸೀತಾರಾಮ್ ಅವರು 2016 ರಿಂದ ಆರ್.ಎಸ್.ಎಸ್ ಮಂಗಳೂರು ವಿಭಾಗ ಕಾರ್ಯವಾಹರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಸುಳ್ಯದ ನರಿಯೂರಿನವರು.