
ಆ.27,28 ರಂದು ಕಡಬದಲ್ಲಿ ಉಚಿತವಾಗಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ. ಕಡಬದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಬೆಳಿಗ್ಗೆ 8.30 ರಿಂದ ಸಂಜೆ 5.00ರ ತನಕ ನಡೆಯಲಿದ್ದು, ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಆಸಕ್ತರು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕಾಗಿ ಬಿಜೆಪಿ ಮಂಡಲ ಸಮಿತಿ ಪ್ರಕಟಣೆ ಯಲ್ಲಿ ತಿಳಿಸಿದೆ.