- Wednesday
- April 2nd, 2025

ಎಣ್ಮೂರಿನ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ಕುಮಾರ್ ಭೀಮಗುಳಿ ಮಾಲಕತ್ವದ ಜನ್ಯ ಎಂಟರ್ ಪ್ರೈಸಸ್ ಶುಭಾರಂಭಗೊಂಡಿದೆ. ಇಲ್ಲಿ ಎಲ್ಲಾ ವಿಧದ ಕೃಷಿ ಉಪಕರಣಗಳ ಮಾರಾಟ ಮತ್ತು ಸರ್ವೀಸ್ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ವತಿಯಿಂದ 29ನೇ ವರ್ಷದ ಶ್ರೀಗಣೇಶೋತ್ಸವವನ್ನು ಆಚರಿಸಲಾಯಿತು. ಸರಳ ಹಾಗೂ ಸಾಂಕೇತಿಕ ಆಚರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ಆಚರಣೆ ನಡೆಯುತ್ತಿದ್ದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸೀಮಿತ ಶ್ರದ್ಧಾಳುಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಸುಬ್ರಹ್ಮಣ್ಯ ವತಿಯಿಂದ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ವಿಘ್ನವಿನಾಯಕನ ಭವ್ಯ ವಿಗ್ರಹ ಪ್ರತಿಷ್ಟಾಪನೆ ನಡೆಯಿತು.