ರೂ. 5.529 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ಬರೆಪ್ಪಾಡಿ- ಪಲ್ಲತ್ತಾರು- ಪೆರುವಾಜೆ ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ರಾಕೇಶ್ ರೈ ಕಡೆಂಜಿ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪ್ರಮೀಳಾ ಜನಾರ್ಧನ್, ತಾಲೂಕು ಪಂಚಾಯತ್ ಸದಸ್ಯರುಗಳಾದ ಲಲಿತ ಈಶ್ವರ್, ತೇಜಸ್ವಿನಿ ಕಟ್ಟಪುಣಿ, ಪುತ್ತೂರು ಎ.ಪಿ.ಎಂ.ಸಿ ಅಧ್ಯಕ್ಷ ಶ್ರೀ ದಿನೇಶ್ ಮೆದು, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
- Tuesday
- December 3rd, 2024