ರೂ. 55 ಲಕ್ಷ ವೆಚ್ಚದಲ್ಲಿ ಶಾಸಕರ ಮಳೆಹಾನಿ ನಿಧಿಯಲ್ಲಿ ದುರಸ್ತಿಗೊಂಡ ಬೆಳಂದೂರು- ಪೆರುವಾಜೆ ಕಾಂಕ್ರೀಟಿಕೃತ ರಸ್ತೆಯ ಉದ್ಘಾಟನೆಯನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಶ್ರೀ ಎಸ್ ಅಂಗಾರ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಕೇಶ್ ರೈ ಕಡೆಂಜಿ, ಶ್ರೀ ಸುಬೋಧ್ ಶೆಟ್ಟಿ ಮೇನಾಲ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪ್ರಮೀಳಾ ಜನಾರ್ಧನ್, ತಾಲೂಕು ಪಂಚಾಯತ್ ಸದಸ್ಯರುಗಳಾದ ಲಲಿತ ಈಶ್ವರ್, ತೇಜಸ್ವಿನಿ ಕಟ್ಟಪುಣಿ, ಪುತ್ತೂರು ಎ.ಪಿ.ಎಂ.ಸಿ ಅಧ್ಯಕ್ಷ ಶ್ರೀ ದಿನೇಶ್ ಮೆದು, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
- Tuesday
- December 3rd, 2024