ರೂ. 6.54 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ನಾರ್ಕೊಡು- ಅಜ್ಜಾವರ- ಪೇರಾಲು ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ವೆಂಕಟ್ ವಳಲಂಬೆ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ಚನಿಯ ಕಲ್ತಡ್ಕ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಸುಳ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಕೇಶ್ ರೈ ಕಡೆಂಜಿ, ಶ್ರೀ ಸುಬೋಧ್ ಶೆಟ್ಟಿ ಮೇನಲ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
- Wednesday
- November 6th, 2024