
ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಅಲೆಕ್ಕಾಡಿ ಇದರ ನೂತನ ಅಧ್ಯಕ್ಷರ ಆಯ್ಕೆಯು ಆ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ತಾಲೂಕು ಅಭಿವೃದ್ಧಿ ಅಧಿಕಾರಿ ಕೆ. ಶಿವಲಿಂಗಯ್ಯನವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು ಇವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.