Ad Widget

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಧರ್ಮಪಾಲ ಕೊಯಿಂಗಾಜೆ ಸಂತಾಪ

ಮಾಜಿ ರಾಷ್ಟ್ರಪತಿ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ಸಂತಾಪ ಸೂಚಿಸಿದ್ದಾರೆ.
ಪ್ರಣಬ್ ಮುಖರ್ಜಿ ಅವರು ಭಾರತ ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಒಬ್ಬರು. ಅತ್ಯುತ್ತಮ ವ್ಯಕ್ತಿತ್ವ ಹೊಂದಿದ್ದ ಅವರು ಸುಮಾರು 5 ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಸೇವೆ ಸಲ್ಲಿಸಿದ ಮಹಾನ್ ನಾಯಕ. ಯುಪಿಎ ಸರ್ಕಾರದಲ್ಲಿ ಪ್ರಮುಖ ಸಚಿವಾಲಯದ ಹುದ್ದೆ ಅಲಂಕರಿಸಿ, ನಂತರ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಚಿಂತನೆ, ಕೆಲಸ ಹಾಗೂ ಸೇವೆಯಿಂದ ದೇಶದ ಸರ್ವಶ್ರೇಷ್ಠ ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾದವರು. ದೇಶದ ಇತಿಹಾಸ, ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಅಪಾರವಾದ ಜ್ಞಾನ ಹೊಂದಿದ್ದ ಮಹಾನ್ ನಾಯಕನನ್ನು ನಾವಿಂದು ಕಳೆದುಕೊಂಡಿದ್ದೇವೆ.
ಅವರ ಅಗಲಿಕೆಯ ನೋವನ್ನು ಅವರ ಕುಟುಂಬ ಸದಸ್ಯರು ಸೇರಿದಂತೆ ಅವರ ಅಪಾರ ಅಭಿಮಾನಿ ಬಳಗಕ್ಕೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading