- Wednesday
- May 28th, 2025

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.31 ರಂದು ಚಿನ್ನದ ಉಂಗುರವೊಂದು ಬಿದ್ದು ಸಿಕ್ಕಿರುತ್ತದೆ. ಇದಕ್ಕೆ ಸಂಬಂಧಪಟ್ಟವರು ಪಂಜ ದೇವಾಲಯದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರ್ ಇವರಲ್ಲಿ ಗುರುತು ಹೇಳಿ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡುಬಡತನ ಹಾಗೂ ತಾಯಿಯ ಅನಾರೋಗ್ಯದ ನಡುವೆಯೂ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕಡಬ ತಾಲೂಕಿನ ಬಳ್ಪ ಗ್ರಾಮದ ವಿಷ್ಣುಮಂಗಿಲ ಹೊನ್ನಪ್ಪ ಗೌಡ ಮತ್ತು ವಾರಿಜಾ ದಂಪತಿಗಳ ಪುತ್ರಿ ಆಶಿತಾಳಿಗೆ, ಗ್ರಾಮದ ಸಹೃದಯಿ ದಾನಿಗಳಿಂದ ಸಂಗ್ರಹಿಸಲ್ಪಟ್ಟ ರೂ.18000 ಮೊತ್ತದ ಹಣವನ್ನು ಸಹಾಯದ ರೂಪದಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಬಳ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್...