
ಮಂಗಳೂರಿನಲ್ಲಿ ನೆಲೆಸಿರುವ ಮೂಲತಃ ದೇವಚಳ್ಳ ಗ್ರಾಮದ ಕರಂಗಲ್ಲು ಡಾ.ಪುರುಷೋತ್ತಮ ಕೆ.ವಿ.ಯವರು ಮಂಗಳೂರಿನ ಐಕಳ ಪೊಂಪೈ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿದ್ದಾರೆ. ಸುಮಾರು 15 ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅರೆಬಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಸದಸ್ಯರಾಗಿ ಕೂಡ ಆಯ್ಕೆಯಾಗಿದ್ದಾರೆ. ಇವರು ದೇವಚಳ್ಳ ಗ್ರಾಮದ ಕರಂಗಲ್ಲು ದಿ. ವೆಂಕಪ್ಪ ಗೌಡ ಮತ್ತು ದಿ. ದುಗ್ಗಮ್ಮ ದಂಪತಿಗಳ ಪುತ್ರ.