ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ್ ಮಡಪ್ಪಾಡಿ ಆಯ್ಕೆಯಾಗಿದ್ದಾರೆ. ಇಂದು ಪುತ್ತೂರಿನ ಸುಭದ್ರ ಸಭಾಭವನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಬೈಠಕ್ ನಲ್ಲಿ , ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಕಾರಂತ್ ರವರು ಈ ಜವಾಬ್ದಾರಿಯನ್ನು ಘೋಷಣೆ ಮಾಡಿದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಮಾಯಿಪನ ಮನೆಯವರಾದ ಇವರು ಈ ಹಿಂದೆ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.
- Thursday
- November 21st, 2024