
ಕರ್ನಾಟಕ ರಾಜ್ಯ ಎನ್.ಎಸ್.ಯು.ಐ.ವತಿಯಿಂದ ಎಸ್.ಎಸ್.ಎಲ್.ಸಿ.ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸುವ ನಿಟ್ಟಿನಲ್ಲಿ ನಡೆಯುತ್ತಿರುವ “ನಮ್ಮೂರ ಹೆಮ್ಮೆ “ಕಾರ್ಯಕ್ರಮಕ್ಕೆ ಸೆ.8 ರಂದು ಅಪರಾಹ್ನ 2 ಗಂಟೆಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗಮಿಸಿ ಚಾಲನೆ ನೀಡಲಿದ್ದಾರೆ. ವಿವಿಧ ಘಟಕಗಳ ನಾಯಕರು ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ದ.ಕ. ಜಿಲ್ಲಾ ಎನ್.ಎಸ್.ಯು.ಐ.ಉಪಾಧ್ಯಕ್ಷ ಶವಾದ್ ಗೂನಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.