
ಸುಳ್ಯದ ಕೊಡಿಯಾಲಬೈಲ್ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ವಿಜಯಲಕ್ಷ್ಮಿಯವರು ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಕನ್ನಡ ಭಾಷಾ ಸಹಶಿಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ. ಜಯನಗರ ಸ.ಉ.ಹಿ.ಪ್ರಾ. ಶಾಲೆಯಲ್ಲಿ 18 ವರ್ಷ ಸೇವೆ ಸಲ್ಲಿಸಿದ ಬಳಿಕ ಕೊಡಿಯಾಲಬೈಲ್ ಸ.ಕಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡು ಅಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ವಿಜಯಲಕ್ಷ್ಮಿಯವರು ಮೂಲತಃ ಅಡ್ಕಾರಿನವರಾಗಿದ್ದು, ಪ್ರಸ್ತುತ ಸುಳ್ಯದ ಉತ್ತರ ಬೀರಮಂಗಲದಲ್ಲಿ ನೆಲೆಸಿದ್ದಾರೆ. ಇವರ ಪತಿ ಭಾಸ್ಕರರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ. ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪುತ್ರ ಜೀವಿತ್ ಸುಳ್ಯ ಎನ್.ಎಂ.ಸಿ.ಯಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಯಾಗಿದ್ದಾರೆ.