
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಮಡ್ಕ ಗ್ರಾ.ಪಂ. ಹಾಗೂ ಸಪ್ತಶ್ರೀ ಗೊಂಚಲು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡ್ಕ ಶಿವಗೌರಿ ಕಲಾ ಮಂದಿರದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆಪ್ಟೆಂಬರ್ 15 ರಂದು ಜರುಗಿತು. ಕಾರ್ಯಕ್ರಮದಲ್ಲಿ ಶ್ರೀಮತಿ ರುಕ್ಮಿಣಿ.ಬಿ.ಸಿ. ಇವರು ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಮೇಲ್ವಿಚಾರಕಿ ರವಿಶ್ರೀ.ಕೆ ಪ್ರಾಸ್ತಾವಿಕ ಮಾತನ್ನಾಡಿದರು. ಶ್ರೀಮತಿ ಮಮತಾ ನಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯ ಶ್ರೀ ಅಬ್ದುಲ್ ಗಫೂರ್ ಮುಖ್ಯ ಅತಿಥಿಯಾಗಿದ್ದರು. ಕಲ್ಮಡ್ಕ ಗ್ರಾ.ಪಂ.ಕಾರ್ಯದರ್ಶಿ ಶ್ರೀ ಗೋಪಾಲಕೃಷ್ಣ.ಕೆ ಉದ್ಯೋಗ ಖಾತ್ರಿ ಬಗ್ಗೆ ಮಾಹಿತಿ ನೀಡಿದರು. ಶ್ರೀ ಲೋಕೇಶ್ ತಂಟೆಪ್ಪಾಡಿ ಕ್ಷಯ ರೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಪವಿತ್ರಾ ಆರೋಗ್ಯ ಮತ್ತು ಪೌಷ್ಟಿಕ ಆಹಾರ ಪೋಷಣೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗೊಂಚಲು ಸಮಿತಿ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು. ಶ್ರೀಮತಿ ದೇವಿಕಾ ಕಲ್ಮಡ್ಕ ಪ್ರಾರ್ಥಿಸಿ, ಸ್ತ್ರೀಶಕ್ತಿ ಸದಸ್ಯೆ ಮಮತಾ ನಿರೂಪಿಸಿದರು. ಪಡ್ಪಿನಂಗಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೀಲಾವತಿ.ಎಂ ಸ್ವಾಗತಿಸಿ, ಸಂಗಮ ಸ್ತ್ರೀಶಕ್ತಿ ಕಾರ್ಯದರ್ಶಿ ಶ್ರೀಮತಿ ಧನ್ಯ ವಂದಿಸಿದರು. ಕಲ್ಮಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ, ಪಂಬೆತ್ತಾಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಹಾಗೂ ಕೋಟೆಗುಡ್ಡೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕಸ್ತೂರಿ ಸಹಕರಿಸಿದರು.