
ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ
ಇದರ ಆಶ್ರಯದಲ್ಲಿ ಮೋದಿ ಜನ್ಮದಿನಾಚರಣೆ ಹಾಗೂ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ ಸೆ. 17 ರಂದು
ಕಂದ್ರಪ್ಪಾಡಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಮಹಾಬಲೇಶ್ವರ ಮುಂಡೋಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ವಹಿಸಿದ್ದರು. ದೊಡ್ಡಣ್ಣ ಕಾಜಿಮಡ್ಕ ಮುಖ್ಯ ಅತಿಥಿಯಾಗಿದ್ದರು. ಯುವಕ ಮಂಡಲದ ಕಾರ್ಯದರ್ಶಿ ಓಂ ಪ್ರಕಾಶ್ ಮುಂಡೋಡಿ ಸ್ವಾಗತಿಸಿ, ಪುನೀತ್ ರವಿ ಹಿರಿಯಡ್ಕ ವಂದಿಸಿದರು. ಪ್ರೀತಮ್ ಮುಂಡೋಡಿ ಕಾರ್ಯಕ್ರಮ ನಿರೂಪಿಸಿದರು.