
ಕೊಡಗು ಜಿಲ್ಲೆ ಸಂಪಾಜೆ ಗ್ರಾಮದ ಪಯಸ್ವಿನಿ ಸಹಕಾರಿ ಸಂಘದಲ್ಲಿ ಸೆ. 19 ರಂದು ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕ ವತಿಯಿಂದ ಸಂಪಾಜೆ ಪಟೇಲ್ ದತ್ತಿ ನಿಧಿ ಹಾಗೂ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಅನಂತ್ ಎನ್.ಸಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷರಾದ ಲೋಕೇಶ್ ಸಾಗರ್, ಜಿಲ್ಲಾ ಪಧಾಧಿಕಾರಿಗಳಾದ ಲೋಕನಾಥ್ ಅಮೆಚೂರು, ಪಯಸ್ವಿನಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ ಉಪಸ್ಥಿತರಿದ್ದರು ಹಾಗೂ ಉಪನ್ಯಾಸ ನೀಡಲು ಶ್ರೀಮತಿ ತುಳಸಿ ಮೋಹನ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ದತ್ತಿ ನಿಧಿ ಹಾಗೂ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಕುಮಾರ್ ಚೆದ್ಕಾರ್ ಸ್ವಾಗತಿಸಿದರು, ಬಿ.ಜೆ ಯಶೋಧರರವರು ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.