ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೆಪ್ಟೆಂಬರ್ 24 ರಿಂದ 30ರ ತನಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ. ಇದರ ಅಂಗವಾಗಿ ಸೆಪ್ಟೆಂಬರ್ 28 ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ. ಪೊಲೀಸ್ ಠಾಣೆ. ಎರಡನೇ ಮಹಡಿ. ಮೂಡ ಬಿಲ್ಡಿಂಗ್. ಊರ್ವ ಸ್ಟೋರ್.ದ.ಕ ಜಿಲ್ಲೆ. ಮಂಗಳೂರು 57 5006 ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Saturday
- November 23rd, 2024