

ಕೊರೋನ ವೈರಸ್ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶವನ್ನು ನೀಡಿದ್ದು ಇದರ ಅಂಗವಾಗಿ ಸುಳ್ಯ ನಗರ ಪ್ರದೇಶದಲ್ಲಿ ಮಾಸ್ಕ್ ದರಿಸದೆ ಓಡಾಡುತ್ತಿರುವ ವ್ಯಕ್ತಿಗಳನ್ನು ಜ್ಯೋತಿ ಸರ್ಕಲ್ ಬಳಿ ಹಾಗೂ ಸುಳ್ಯ ಪೊಲೀಸ್ ಠಾಣೆ ಮುಂಬಾಗ ಪರಿಶೀಲನೆ ನಡೆಸುತ್ತಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಹಾಗೂ ಸುಳ್ಯ ಪೊಲೀಸ್ ಉಪನಿರೀಕ್ಷಕ ಹರೀಶ್ ಎಂ ಆರ್ ರವರ ನೇತೃತ್ವದಲ್ಲಿ ದಂಡ ವಿಧಿಸಲಾಗುತ್ತಿದೆ.