Ad Widget

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆ ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆಯೆಂದು ಎಸ್‌ಡಿಪಿಐ ಪ್ರತಿಭಟನೆ


ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ಬೆಳ್ಳಾರೆ ವಲಯ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರಿವಾಜ್ಞೆಯು ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಅದರ  ವಿರುದ್ಧ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಲಯ ಅಧ್ಯಕ್ಷರಾದ ಸಿದ್ದೀಕ್ ಬೆಳ್ಳಾರೆ ನೇತೃತ್ವದಲ್ಲಿ ಸೆ.25 ರಂದು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ರವರು ಮಾತನಾಡಿ ಹೊಸ ಕಾಯ್ದೆ ಯಿಂದ ರೈತರಿಗೆ ಏನು ಪ್ರಯೋಜನವಿಲ್ಲ ಇದು ಬಂಡವಾಳ ಶಾಹಿಗಳಿಗಳಿಗೆ ಲಾಭ ಮಾಡಿ ಕೊಡುವ ಹುನ್ನಾರ ಮಾತ್ರವಾಗಿದೆ. ಎಪಿಎಂಸಿಯನ್ನು ಖಾಸಗೀಕರಣ ಮಾಡುವ ದುರುದ್ದೇಶವಾಗಿದೆ ಎಂದು ಹೇಳಿದರು .
ಪ್ರತಿಭಟನಾ ಸಭೆಯಲ್ಲಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಹಾಜಿ.ಕೆ ಮಮ್ಮಾಲಿ , ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಬಸೀರ್ ಬಿ.ಎ , ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ವಲಯ ಅಧ್ಯಕ್ಷರಾದ ಶಹೀದ್ ಎಂ, ಎಸ್‌ಡಿಪಿಐ ಬೆಳ್ಳಾರೆ ವಲಯ ಉಪಾಧ್ಯಕ್ಷಾರದ ಆಸೀರ್ ಎ.ಬಿ, ಎಸ್‌ಡಿಪಿಐ ಬೆಳ್ಳಾರೆ ವಲಯ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ತಂಬಿನಮಕ್ಕಿ , ಜೈನುದ್ದೀನ್ ಯು.ಎಚ್, ಎಣ್ಮೂರು ಗ್ರಾಮ ಸಮಿತಿ ಅಧ್ಯಕ್ಷರಾದ ಹಮೀದ್ ಮರಕ್ಕಡ ಮತ್ತಿತರರು ಉಪಸ್ಥಿತರಿದ್ದರು.
ವಲಯ ಅಧ್ಯಕ್ಷರಾದ ಸಿದ್ದೀಕ್ ಬೆಳ್ಳಾರೆ ಸ್ವಾಗತಿಸಿ,ಫೈಝಲ್ ಜಿ ರವರು ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading