
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ಮಸೂದೆ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪ್ತಿ ದಲಿತ ಸಂಘಟನೆಗಳು, ಕಾಮಿ೯ಕ ಸಂಘಟನೆ , ರೈತ ಸಂಘ ರೈತಪರ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳು ಸೆ. 28 ನೇ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು ಮಡಿಕೇರಿ ಮಾರುಕಟ್ಟೆ ಹಿತರಕ್ಷಣಾ ಸಮಿತಿಯು ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಸಂಪೂರ್ಣ ಬಂದ್ ಇರಲಿದೆ ಎಂದು ಸಮಿತಿಯ ಅಧ್ಯಕ್ಷ ರಜಾಕ್ ಪತ್ರಿಕೆಗೆ ತಿಳಿಸಿದ್ದಾರೆ.