ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಆರ್.ಐ.ಡಿ.ಎಫ್ ನಬಾರ್ಡ್ 25 ಯೋಜನೆಯಡಿ ರೂ.119 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಲೇಜಿನ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭವು ಅ.01 ರಂದು ನಡೆಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ವಿಸ್ತೃತ ಕಟ್ಟಡದ ಉದ್ಘಾಟನೆಗೈದರು.
ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು.
ನಂತರ ನಡೆದ ಸಭಾಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ದೀಪ ಬೆಳಗಿಸಿ ಉದ್ಘಾಟಿಸಿ, ಶಾಲೆಯ ಇಂಟರ್ ಲಾಕ್ ಅಳವಡಿಕೆಗೆ 2 ಲಕ್ಷ ರೂಪಾಯಿಗಳ ಘೋಷಣೆ ಮಾಡಿದರು. ಸಭಾಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿ ಶಿಕ್ಷಣ ವ್ಯವಸ್ಥೆಯಲ್ಲಿನ ಅಮೂಲಾಗ್ರ ಬದಲಾವಣೆಗಳು ಪ್ರಸ್ತುತ ಕಾಲಘಟ್ಟಕ್ಕೆ ಪೂರಕವಾಗಿರಬೇಕು ಎಂದರು.
ಈ ಸಂದರ್ಭದಲ್ಲಿ ಕಟ್ಟಡದ ಎ ಗ್ರೇಡ್ ಕಾಂಟ್ರಾಕ್ಟರ್ ಅಬ್ದುಲ್ ರಜಾಕ್ ಕಪ್ಪರವರನ್ನು ಶಾಸಕರು ಕಾಲೇಜು ವತಿಯಿಂದ ಸನ್ಮಾನಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಹಮ್ಮದ್ ಇಮ್ತಿಯಾಜ್, ಎಚ್.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಸಣ್ಣೇ ಗೌಡ, ಬೆಳ್ಳಾರೆ ಗ್ರಾ.ಪಂ.ಆಡಳಿತಾಧಿಕಾರಿ ಹನುಮಂತರಾಯಪ್ಪ, ಸರ್ಕಾರಿ ನೌಕರರ ಸಂಘದ ಕರ್ನಾಟಕ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಹಸೀನಾ ಬಾನು, ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ, ಮುಖ್ಯಶಿಕ್ಷಕ ಮಾಯಿಲಪ್ಪ.ಪಿ, ಪ್ರೌಢಶಾಲಾ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ, ಸಿ.ಬಿ.ಸಿ ಕಾರ್ಯಾಧ್ಯಕ್ಷ ಬಾಳಪ್ಪ ಮಣಿಮಜಲು, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೇಶವ ನಾಯಕ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹಸೀನಾಬಾನು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ
ಶಾಂಭವಿ ಮತ್ತು ಚಂದನಲಕ್ಷ್ಮೀ ಪ್ರಾರ್ಥಿಸಿ, ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ ಧನ್ಯವಾದ ಸಮರ್ಪಿಸಿದರು.