
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.1ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ ಕಂಜಿಪಿಲಿ ವಹಿಸಿದ್ದರು. ವೇದಿಕೆಯಲ್ಲಿ ಮಾನ್ಯ ಶಾಸಕ ಎಸ್ ಅಂಗಾರ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೋಗಿ ಮತ್ತು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ ಮತ್ತು ಸುಬೋಧ್ ಶೆಟ್ಟಿ ಮೇನಾಲ ಅವರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಪನ್ನೆ, ಪ್ರಧಾನ ಕಾರ್ಯದರ್ಶಿಗಳಾಗಿ ನವೀನ ಸಾರೆಕೆರೆ ಮತ್ತು ಚಂದ್ರಶೇಖರ ಜಾದವ್ ಕೇರ್ಪಳ ಹಾಗೂ ಎಲ್ಲಾ ಪದಾಧಿಕಾರಿಗಳು ಪದಗ್ರಹಣ ಸ್ವೀಕಾರ ಮಾಡಿದರು. ನಿಕಟಪೂರ್ವ ಅಧ್ಯಕ್ಷರಾದ ಸೋಮನಾಥ ಪೂಜಾರಿ ಸ್ವಾಗತಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ನವೀನ್ ಸಾರೆಕೆರೆ ವಂದಿಸಿದರು.