
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಅ.2 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ ಧ್ವಜಾರೋಹಣ ನೆರವೇರಿಸಿದರು.
ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.