Ad Widget

ಅರಂತೋಡು ಸೊಸೈಟಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.3ರಂದು ಭೇಟಿ ನೀಡಿದರು .
ಸಚಿವರನ್ನು ಅರಂತೋಡಿನಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ,ಉಪಾಧ್ಯಕ್ಷ ದಯಾನಂದ ಕುರುಂಜಿ, ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್, ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಸಹಕಾರಿ ಸಂಘದ ವತಿಯಿಂದ ನಡೆಸಲಾಗುತ್ತಿರುವ ಸಮೃದ್ಧಿ ಮಾರ್ಟ್ ಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

. . . . . . . . .


ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಯೂನಿಯನ್ ಸಂಘದ ಅಧ್ಯಕ್ಷ ರಮೇಶ್ ದೇಲಂಪಾಡಿಯವರ ನೇತೃತ್ವದ ತಂಡದಿಂದ ಸಾಲಮನ್ನಾ ಸೇರಿದಂತೆ ಇನ್ನಿತರ ಅಗತ್ಯ ಬೇಡಿಕೆಗಳ ಮನವಿಯನ್ನು ಸಚಿವರಲ್ಲಿ ಸಲ್ಲಿಸಿದರು. ವಸಂತ ಭಟ್ ತೊಡಿಕಾನ ಅವರು ತಾಳೆಬೆಳೆಗೆ ಉತ್ತೇಜನದ ಬಗ್ಗೆ ಮನವಿ ಸಲ್ಲಿಸಿದರು.

. . . . . . .

ಅಡಿಕೆ ಹಳದಿರೋಗ ಹಾಗೂ ಈ ಭಾಗದ ಕೃಷಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸುಳ್ಯ ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅವರು ಸಚಿವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿಷ್ಣು ಭಟ್, ಬಿಜೆಪಿ ನಾಯಕರಾದ ಹರೀಶ್ ರೈ ಉಬರಡ್ಕ, ಸಹಕಾರಿ ಸಂಘದ ನಿರ್ದೇಶಕರಾದ ವಿನೋದ್, ಕುಸುಮಾಧರ, ಕೇಶವ, ವಿಜೇತ್ ಮರುವಳ, ಅರಂತೋಡು ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಉಳುವಾರು, ಬಿಜೆಪಿ ಮಹಿಳಾ ಮೋರ್ಚಾ ಸಮಿತಿ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ ಉಳುವಾರು,ಕಿಶೋರ್ ಕುಮಾರ್ ಉಳುವಾರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading