
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಮತ್ತು ಸೇವಾ ಭದ್ರತೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಸುಳ್ಯ ಸಮಿತಿ ವತಿಯಿಂದ ವಿವಿಧ ರೀತಿಯ ಪ್ರತಿಭಟನೆ ಹೋರಾಟಗಳು ನಡೆಯುತ್ತಿದೆ. ಸುಮಾರು ಹತ್ತು ದಿನಗಳಿಂದ ಈ ಹೋರಾಟಗಳು ನಡೆಯುತ್ತಿದ್ದು ಸರ್ಕಾರವಾಗಲಿ ಜನಪ್ರತಿನಿಧಿಗಳಾಗಲಿ ಯಾರು ಇತ್ತಕಡೆ ಗಮನ ಹರಿಸುತ್ತಿಲ್ಲ. ಇವರ ಹೋರಾಟ ನ್ಯಾಯಯುತವಾಗಿದ್ದು ಪ್ರತಿಯೊಬ್ಬ ನಾಗರಿಕರು ಈ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿ ಬೇಕಾಗಿದೆ. ಸುಳ್ಯ ನಗರ ಪಂಚಾಯತ್ ನ ಸದಸ್ಯನಾಗಿರುವ ನಾನು ಮತ್ತು ನನ್ನ ಸಹ ಮಿತ್ರರು ಗುತ್ತಿಗೆ ಹಾಗೂ ಹೊರ ಗುತ್ತಿಗೆದಾರರ ಹೋರಾಟಕ್ಕೆ ಬೆಂಬಲವನ್ನು ಸೂಚಿಸುತ್ತಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಸಂಘದ ಮುಖ್ಯಸ್ಥರೊಂದಿಗೆ ಇದರ ಬಗ್ಗೆ ಚರ್ಚೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
[10/3, 2:56 PM