ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಬೇಡಿಕೆ ಬಗ್ಗೆ ಗಮನವಹಿಸುವಂತೆ ಶಾಸಕ ಆಯನೂರು ಮಂಜುನಾಥ್ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ಪ್ರತಿಸ್ಪಂದಿಸಿದ್ದಾರೆಂದು ತಿಳಿದುಬಂದಿದೆ ತಿಳಿದುಬಂದಿದೆ. ಕೂಡಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲುಗೆ ಈ ಬಗ್ಗೆ ಗಮನ ಹರಿಸಿ, ಸೂಕ್ತ ಕ್ರಮವಹಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ರಾಜ್ಯದ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರು ಕಳೆದ 10 ದಿನಗಳಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ನಿರತರಾಗಿದ್ದಾರೆ.
ಇಂತಹ ನೌಕರರ ಬೇಡಿಕೆಗಳ ಬಗ್ಗೆ ಕ್ರಮವಹಿಸುವಂತೆ ಸಂಘದ ಗೌರವಾಧ್ಯಕ್ಷರು ಹಾಗೂ ಶಾಸಕರಾದ ಆಯನೂರು ಮಂಜುನಾಥ್ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರಿಗೆ ಪತ್ರದಲ್ಲಿ ಮನವಿ ಮಾಡಿದ್ದರು.
ಈ ಪತ್ರಕ್ಕೆ ಪ್ರತಿ ಸ್ಪಂದಿಸಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ವಿಧಾನ ಪರಿಷತ್ ಸದಸ್ಯರಾದಂತ ಆಯನೂರು ಮಂಜುನಾಥ್ ಮುಖ್ಯಮಂತ್ರಿಗಳಿಗೆ ಪತ್ರದಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರದ ಬಗ್ಗೆ ಪ್ರಸ್ತಾಪಿಸಿದ್ದು, ಸದರಿ ಮನವಿಯ ಮೇಲೆ ಮುಖ್ಯಮಂತ್ರಿಯವರು ಮುಂದಿನ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿರುತ್ತಾರೆ. ಮತ್ತೆ ದಿನಾಂಕ 02-10-2020ರಂದು ಮುಖ್ಯಮಂತ್ರಿಗಳು ಪತ್ರದಲ್ಲಿ ಜರೂರು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿರುತ್ತಾರೆ.
ಸದರಿ ಪತ್ರಗಳ ಕುರಿತು ಜರೂರಾಗಿ ವೈದ್ಯಕೀಯ ಶಿಕ್ಷಣ ಸಚಿವರು, ಆರೋಗ್ಯ ಸಚಿವರ ಗಮನಕ್ಕೆ ತಂದು, ಮುಂದಿನ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿಯವರಿಂದ ನಿರ್ದೇಶಿತನಾಗಿದ್ದೇನೆ ಎಂಬುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ರಾಜ್ಯ ಆರೋಗ್ಯ, ವೈದ್ಯಕೀಯ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿಗಳು ನಮ್ಮ ಗೌರವಾಧ್ಯಕ್ಷರಾಂದತ ಆಯನೂರು ಮಂಜುನಾಥ್ ಪತ್ರಕ್ಕೆ ಪ್ರತಿಕ್ರಿಯಿಸಿ, ಕ್ರಮವಹಿಸುವಂತೆ ಸೂಚಿಸಿದ್ದು ಸಂತಸ ತಂದಿದೆ. ಇದೀಗ ಕೂಡಲೇ ವೈದ್ಯಕೀಯ, ಆರೋಗ್ಯ ಸಚಿವರು ನಮ್ಮ ಬೇಡಿಕೆ ಈಡೇರಿಕೆಯತ್ತ ಗಮನವಹಿಸುವಂತೆ ಒತ್ತಾಯಿಸಿದ್ದಾರೆ.
ಅಲ್ಲದೇ ಸಿಎಂ ಸೂಚನೆಯ ಮೇರೆಗೆ ಸಚಿವರು ಕ್ರಮಕೈಗೊಂಡು, ನಮ್ಮ ಬೇಡಿಕೆ ಈಡೇರಿಸುವವ ವರೆಗೆ ನಮ್ಮ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಹಿಂಪಡೆಯುವುದಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಿದ ನಂತ್ರವೇ ನಮ್ಮ ಮುಷ್ಕರವನ್ನು ಹಿಂಪಡೆಯೋದು, ಅಲ್ಲಿಯವರೆಗೆ ನಮ್ಮ ಮುಷ್ಕರವನ್ನು ಹಿಂಪಡೆಯುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
- Thursday
- October 31st, 2024