ಮಂಗಳೂರು:- ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್(WIM) ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ಇದರ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮತ್ತು ಎನ್ ಡಬ್ಲೂ ಎಫ್ ಜಿಲ್ಲಾಧ್ಯಕ್ಷೆ ಸಮೀಮಾ ಮಂಚಿ ಮಾತನಾಡಿದರು.
ವಿಮ್ ದ.ಕ.ಜಿಲ್ಲಾ ಕಾರ್ಯದರ್ಶಿ ಝಹನಾ ಬಂಟ್ವಾಳ ಸ್ವಾಗತಿಸಿ ಸಮಿತಿ ಸದಸ್ಯೆ ಝುಲೈಕಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
- Thursday
- November 21st, 2024