ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅ.8ರಂದು ಪತ್ತೆಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಮಯ್ಯ ಭಟ್ (55 ವ.) ಎಂದು ಗುರುತಿಸಲಾಗಿದೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಾಳ ನಿವಾಸಿಯಾಗಿರುವ ಕೃಷ್ಣ ಮಯ್ಯ ಭಟ್ ಕಳೆದ 5 ವರ್ಷಗಳಿಂದ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ರೂಮ್ ನಲ್ಲಿ ವಾಸ್ತವ್ಯವಿದ್ದರು. ಗುರುವಾರ ಬಾಡಿಗೆ ರೂಮಿನಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Thursday
- November 21st, 2024