ಕನಕಮಜಲು ಪ್ರಾ.ಕೃ.ಪ.ಸ.ಸಂಘದಲ್ಲಿ ನಾನಾಜಿ ದೇಶ್ ಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರದ ಅಂಗವಾಗಿ ಸಚಿವರೊಂದಿಗೆ ಸಂವಾದ ಕಾರ್ಯಕ್ರಮ ಇಂದು ನಡೆಯಿತು. ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜತೆ ಗ್ರಾಮಸ್ಥರು ಸಂವಾದ ನಡೆಸಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ ಸೇವಾ ಪ್ರಮುಖ್ ನ.ಸೀತಾರಾಮ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿ.ಪಂ. ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಗ್ರಾ.ಪಂ. ಆಡಳಿತಾಧಿಕಾರಿ ಶ್ರೀಮತಿ ವೀಣಾ, ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜಯಲತ, ಮಾಜಿ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಮಾಜಿ ಸದಸ್ಯರುಗಳಾದ ದಿವಾಕರ ಕಾಳಪ್ಪಜ್ಜನಮನೆ, ಶ್ರೀಮತಿ ಭವಾನಿ ಮಾಣಿಮಜಲು, ಮಹಮ್ಮದ್ ಫವಾಝ್ ಕನಕಮಜಲು, ತಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಸೇರಿದಂತೆ ಗ್ರಾ.ಪಂ. ಮಾಜಿ ಗ್ರಾ.ಪಂ. ಅಧ್ಯಕ್ಷರುಗಳು, ಮಾಜಿ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.