
ಕನಕಮಜಲು ಗ್ರಾಮ ಪಂಚಾಯತಿಗೆ 2019-20ನೇ ಸಾಲಿನಲ್ಲಿ ನಾನಾಜಿ ದೇಶ್ಮುಖ್ ರಾಷ್ಟ್ರೀಯ ಗೌರವ ಗ್ರಾಮಸಭಾ ಪುರಸ್ಕಾರ ದೊರೆತಿದ್ದು, ಈ ಪ್ರಯುಕ್ತ ನಾನಾಜಿ ದೇಶ್ಮುಖ್ ಅವರ ಭಾವಚಿತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಅನಾವರಣಗೊಳಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ ಸೇವಾ ಪ್ರಮುಖ್ ನ.ಸೀತಾರಾಮ, ಜಿ.ಪಂ. ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಗ್ರಾ.ಪಂ. ಆಡಳಿತಾಧಿಕಾರಿ ಶ್ರೀಮತಿ ವೀಣಾ, ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜಯಲತ, ಮಾಜಿ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಮಾಜಿ ಸದಸ್ಯರುಗಳಾದ ದಿವಾಕರ ಕಾಳಪ್ಪಜ್ಜನಮನೆ, ಶ್ರೀಮತಿ ಭವಾನಿ ಮಾಣಿಮಜಲು, ಮಹಮ್ಮದ್ ಫವಾಝ್ ಕನಕಮಜಲು, ತಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಸೇರಿದಂತೆ ಗ್ರಾ.ಪಂ. ಮಾಜಿ ಗ್ರಾ.ಪಂ. ಅಧ್ಯಕ್ಷರುಗಳು, ಮಾಜಿ ಸದಸ್ಯರುಗಳು, ಗ್ರಾ.ಪಂ. ಸಿಬ್ಬಂದಿಗಳು ಸೇರಿದಂತೆ ಊರವರು ಉಪಸ್ಥಿತರಿದ್ದರು.