ಒಬ್ಬ ಮಹಾನ್ ಶಿಕ್ಷಣ ಪ್ರೇಮಿಯ ದೂರದೃಷ್ಟಿಯ ಫಲವನ್ನು ಇಂದು ಸುಳ್ಯ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ. ತಮ್ಮ ಸಂಪತ್ತಿನ ಒಂದಂಶವನ್ನು ಶಿಕ್ಷಣ ಕ್ಕಾಗಿ ವಿನಿಯೋಗಿಸುತ್ತಿರುವ ಶ್ರೀಯುತರು ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಇಂಥ ಮಹಾನುಭಾವರ ಸಂಖ್ಯೆ ಹೆಚ್ಚಬೇಕು ಎಂದು ಹಿರಿಯ ಸಹಕಾರಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಶ್ರೀ ಜಾಕೆ ಮಾಧವ ಗೌಡ ಹೇಳಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಶಿಕ್ಷಣ ಫೋಷಕ ಗೌರವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿರಿಯ ಶಿಕ್ಷಣ ಪೋಷಕ ಮಾಡಬಾಗಿಲು ಕಂಬಳ ಶ್ರೀ ಆನಂದ ಗೌಡ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಕಂಬಳ ಆನಂದ ಗೌಡರಿಗೆ ಶಿಕ್ಷಣ ಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹರಪ್ರಸಾದ್ ತುದಿಯಡ್ಕ ಸಭಾಧ್ಯಕ್ಷತೆ ವಹಿಸಿದ್ದರು. ಎಂಬಿ.ಪೌಂಡೇಶನ್ ನ ಅಧ್ಯಕ್ಷ ಶ್ರೀ ಎಂ.ಬಿ.ಸದಾಶಿವ,ಕಂಬಳ ಆನಂದ ಗೌಡ ದಂಪತಿ ,ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ಧನ್ಯವಾದಗೈದರು.ಶ್ರೀಮತಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.
- Saturday
- November 23rd, 2024