ವಿದ್ಯಾರ್ಥಿಗಳು ಹೊಸ ದೃಷ್ಟಿ ಕೋನವನ್ನು ಬೆಳೆಸಿಕೊಳ್ಳಬೇಕು.ಈಗ ತಮ್ಮ ಪ್ರತಿಭೆ ತೋರ್ಪಡಿಸಲು ಅಗಾಧ ಅವಕಾಶಗಳು ಸಿಗುತ್ತಿವೆ.ಅದನ್ನು ಉಪಯೋಗಿಸುವ ಚಾಣಾಕ್ಷತನ ವಿದ್ಯಾರ್ಥಿಗಳಿಗಿರಬೇಕು. ಕಂಫೋರ್ಟ್ ಜೋನ್ ನಿಂದ ನೀವೆಲ್ಲರೂ ಹೊರಬರಬೇಕು.ನಿಮ್ಮನ್ನು ಉಳಿದವರೊಂದಿಗೆ ಹೋಲಿಸಿಕೊಳ್ಳಬೇಡಿ. ಚರಿತ್ರೆಯಿಂದ ನಾವು ಪಾಠ ಕಲಿಯಬೇಕು. ನಮ್ಮದೇ ಆದ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕುಎಂದು ಎಂ.ಬಿ.ಪೌಂಡೇಶನ್ ನ ಅಧ್ಯಕ್ಷ ಶ್ರೀ ಎಂ.ಬಿ.ಸದಾಶಿವ ಹೇಳಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಮಾತುಗಳನ್ನಾಡಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಹರಪ್ರಸಾದ್ ತುದಿಯಡ್ಕ ಸಭಾಧ್ಯಕ್ಷತೆ ವಹಿಸಿ “ಜಾಗತಿಕ ಆರೋಗ್ಯ ಸಮಸ್ಯೆಯ ಈ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಿರುವುದರಿಂದ ಈ ಸಮಾರಂಭವನ್ನು ಆಯೋಜಿಸಿ ಅಭಿನಂದಿಸಿದ್ದೇವೆ” ಎಂದರು.
ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಶ್ರೀ ಮಾಧವ ಗೌಡ ಜಾಕೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಹಿರಿಯ ಶಿಕ್ಷಣ ಪೋಷಕ ಮಾಡಬಾಗಿಲು ಕಂಬಳ ಶ್ರೀ ಆನಂದ ಗೌಡ ದಂಪತಿಗಳು ಮತ್ತು ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಇನ್ನೋರ್ವ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಧನ್ಯವಾದಗೈದರು.ಶ್ರೀಮತಿ ಗಿರಿಜಾ.ಎಂ.ವಿ ಆಶಯ ಗೀತೆ ಹಾಡಿದರು.ಶ್ರೀಮತಿ ಚಂದ್ರಮತಿ ಮತ್ತು ಶ್ರೀಮತಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ಸುಳ್ಯ ತಾಲೂಕಿನ 41 ವಿದ್ಯಾರ್ಥಿಗಳು ಮತ್ತು ಕನ್ನಡ ಮಾಧ್ಯಮದಲ್ಲಿ ತಾಲೂಕಿನಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.