- Thursday
- November 21st, 2024
ಗ್ವಾಲಿಯಾರ್ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಶೇಷ ನಾಣ್ಯವನ್ನು ಹಣಕಾಸು ಸಚಿವಾಲಯ ಮುದ್ರಿಸಿದೆ.
ತೋಟಗಾರಿಕಾ ಇಲಾಖೆ ಸುಳ್ಯ ಇದರ ಆಶ್ರಯದಲ್ಲಿ ಕಳಂಜ ಗ್ರಾಮ ಪಂಚಾಯತಿನ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಮುದಾಯ ಭವನದಲ್ಲಿ 2 ದಿನಗಳ ಜೇನುಕೃಷಿ ತರಬೇತಿ ಕಾರ್ಯಾಗಾರವು ಅ.12 ರಂದು ಉದ್ಘಾಟನೆಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಜೇನು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರ ಕೋಲ್ಚಾರು ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಜೇನುಕೃಷಿ ತರಬೇತುದಾರರಾಗಿ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೆಲ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದು, ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದ್ದು, ಡಾ.ಕೆ.ಸುಧಾಕರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ವೈಜ್ಞಾನಿಕ ಮಾಹಿತಿಯೊಂದಿಗೆ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಸಾಮರ್ಥ್ಯವಿದ್ದರೆ ಮಾತ್ರ ಸೋಂಕಿನ ನಿಯಂತ್ರಣ ಮತ್ತು...
ಜಿಲ್ಲಾ ಎಸ್ ವೈ ಎಸ್ (ಸುನ್ನಿ ಯುವ ಜನ ಸಂಘ)ಕಾರ್ಯಕರ್ತರ ಸಮಾವೇಶ ಸುಳ್ಯ ಗಾಂಧಿನಗರ ಸುನ್ನೀ ಮಹಲ್ ಕಛೇರಿಯಲ್ಲಿ ಅ 11 ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ವಾಂಸರಾದ ಎಸ್ ಬಿ ಮುಹಮ್ಮದ್ ದಾರಿಮಿ ಇಂದು ನಾವು ಬಲಿಷ್ಠ ಸಂಘ ಶಕ್ತಿ ಯಾಗುವುದರ ಅನಿವಾರ್ಯತೆ ಯನ್ನು ವಿವರಿಸಿ ಸಮಸ್ಯೆ, ಸವಾಲುಗಳನ್ನು ಎದುರಿಸಲು ಒಗ್ಗಟ್ಟು ಪ್ರಮುಖ ಅಂಶವೆಂದು ಅಭಿಪ್ರಾಯ...
ಕಳೆದ 17 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ 167 ಮೆಸ್ಕಾಂ ಗುತ್ತಿಗೆ ಮೀಟರ್ ರೀಡರ್ ಕೆಲಸಗಾರರನ್ನು ಏಕಾಏಕಿಯಾಗಿ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ಮಂಗಳೂರಿನ ಅ.14 ರಂದು ಪೂರ್ವಾಹ್ನ 11 ಗಂಟೆಗೆ ಬಿಜೈಯಲ್ಲಿರುವ ಮೆಸ್ಕಾಂ ಕಚೇರಿ ಮುಂಭಾಗ ಇಂಟೆಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಟೆಕ್ ಕಾನೂನು ಸಲಹೆಗಾರ ದಿನಕರ...
ಕನಕಮಜಲಿನ ನರಿಯೂರು ಎಂಬಲ್ಲಿ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಪುತ್ತೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಯಂತೆ ನಿರ್ಮಿಸಿದ ಬ್ಯಾರಿಕೇಟ್ ಗೆ ಹೊಡೆದಿದೆ. ಕಾರು ಅಪಘಾತಕ್ಕೀಡಾದ ಸಂದರ್ಭದಲ್ಲಿ ಸ್ವಲ್ಪ ಮಳೆ ಸುರಿಯುತ್ತಿದ್ದು, ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಿಗೆ...
ಪಂಜ ಪರಿಸರದಲ್ಲಿ ಅ. 10 ರಂದು ಸಂಜೆ ಎಡೆಬಿಡದೆ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ. ರಾಜ್ಯ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳ ಕಾಡು ಪ್ರದೇಶದಲ್ಲಿ ಅನೇಕ ಕಡೆ ಗುಡ್ಡ ಕುಸಿದಿದೆ. ಈ ಪ್ರದೇಶದ ರಸ್ತೆಬದಿಯಲ್ಲಿ ಹೊಸದಾಗಿ ನಿರ್ಮಿಸಲಾದ ವಿದ್ಯುತ್ ಲೈನ್ಗೆ ಅಪಾರ ಹಾನಿಯಾಗಿದೆ. ಗುಡ್ಡ ಕುಸಿತದಿಂದ ಮರಗಳು ಧರೆಗೆ ಉರುಳಿ ವಿದ್ಯುತ್ ಕಂಬ, ತಂತಿಗೆ...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಎನ್. ಆರ್. ಎಲ್. ಎಂ. ಸಂಯೋಜಕರಾದ ಶ್ರೀ ಮಹೇಶ ರವರು ಸ್ವಸಾಯ ಸಂಘಗಳಿಗೆ ಸಿಗುವ ಸರಕಾರದ ಸಹಾಯಧನ ಮತ್ತು ಸ್ವಉದ್ಯೋಗಕ್ಕೆ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ...
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...
ಅಡ್ಡಬೈಲು - ಬೀದಿಗುಡ್ಡೆ ರಸ್ತೆ ಹೋರಾಟ ಸಮಿತಿಯಿಂದ ಮೂರನೇ ಹಂತದ ಸಭೆ ಅ.11ರಂದು ನಡೆಯಿತು. ರಾಜಕೀಯ ರಹಿತವಾಗಿ ಊರಿನ ಎಲ್ಲಾ ಸಂಘಸಂಸ್ಥೆಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ರಸ್ತೆ ಹೋರಾಟ ಸಮಿತಿಯ ಸದಸ್ಯರು ಮಾನ್ಯ ಶಾಸಕರಾದ ಎಸ್.ಅಂಗಾರರನ್ನು ಭೇಟಿ ಮಾಡಿ ರಸ್ತೆ ಅಭಿವೃದ್ಧಿಯ ಬಗ್ಗೆ ವಿನಂತಿಸಿಕೊಂಡಿದ್ದು, ಶಾಸಕರು ಸೂಕ್ತ ಸ್ಪಂದನೆ ನೀಡಿರುತ್ತಾರೆ. ಮುಂದಿನ 15 ದಿನದಲ್ಲಿ...
Loading posts...
All posts loaded
No more posts