ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರ ಬಗ್ಗೆ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯನ್ನು ಕದಡಲು ಪ್ರೆರೇಪಿಸಿರುವ
ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ಇಂದು (ಅ.13) ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ನಾವೂರು, ಸದಸ್ಯರಾದ ಕೀರ್ತನ್ ಸೂಡ್ಲು, ಪ್ರವೀಣ, ಸುರೇಶ್, ಶರತ್ ಉಪಸ್ಥಿತರಿದ್ದರು.