ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮರ್ಕಂಜ ಲಕ್ಷ್ಮಿ ಪಾವನ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಯಕುಮಾರ್ ಬೆಳ್ಳಿಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು.
ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಜ್ಞಾನ ವಿಕಾಸ ನಡೆದು ಬಂದ ಬಗ್ಗೆ ಹಾಗೂ ಪೂಜ್ಯ ಖಾವಂದರು ಬಡವರ ಉದ್ಧಾರಕ್ಕಾಗಿ ಪಣತೊಟ್ಟಿದ್ದಾರೆ.ನಾವೆಲ್ಲರೂ ನಮ್ಮ ಜೀವನದಲ್ಲಿ ಸಾಧಕರಾಗೋಣ. ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡೋಣ ಎಂದು ಶುಭಹಾರೈಸಿದರು.ಮುಖ್ಯ ಅಥಿತಿಗಳಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮೋನಪ್ಪ ಪೂಜಾರಿ ಭಾಗವಹಿಸಿ ಶುಭಹಾರೈಸಿದರು.ಕೇಂದ್ರದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಗೋಳಿಯಡ್ಕ ಒಕ್ಕೂಟ ಅಧ್ಯಕ್ಷರಾದ ರಾಧಾಕೃಷ್ಣ ಬಹುಮಾನ ವಿತರಿಸಿದರು.ಸಂಯೋಜಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.ಸಭಾಧ್ಯಕ್ಷತೆಯನ್ನು ಪದ್ಮಾವತಿ ವಹಿಸಿದರು. ಸರೋಜ ಸ್ವಾಗತಿಸಿ ಸವಿತಾ ವಂದಿಸಿದರು.ಜ್ಞಾನವಿಕಾಸ ಸಮನ್ವಯಾಧಿಕಾರಿ ಭಾರತಿ, ಒಕ್ಕೂಟ ಕಾರ್ಯದರ್ಶಿ ಭರತ್ ಹಾಗೂ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು.