
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಪ್ರಚಾರ ನಡೆಸುವ ಜವಾಬ್ದಾರಿಯನ್ನು ಸೂರಜ್ ಹೊಸೂರು ಅವರನ್ನು ಕೆಪಿಸಿಸಿ ನೇಮಕ ಮಾಡಿದೆ. ಇವರಿಗೆ ನಾದೂರು ಜಿ.ಪಂ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. ಚೆಂಬು ಗ್ರಾಮದ ಹೊಸೂರಿನವರಾದ ಇವರು ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾಗಿ ಶ್ರಮಿಸುತ್ತಿದ್ದಾರೆ.