ತಮ್ಮ ಕಾಲ ಮೇಲೆ ನಿಂತು ಬದುಕು ಕಟ್ಟಿಕೊಳ್ಳುವರಿಗೆ ಉದ್ಯೊಗ ನೈಪುಣ್ಯ ತರಬೇತಿ ಶಿಬಿರ ಮಾರ್ಗ ಸೂಚಿಯಾಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಅರಂತೋಡಿನಲ್ಲಿ ನಡೆದ ಗ್ರಾಮ ವಿಕಾಸ ಸಮಿತಿ ಮಂಗಳೂರು,ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ ಹಾಗೂ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಸಹಯೋಗದಲ್ಲಿ ಇಲ್ಲಿ ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶ ಕಟ್ಟುವ ವಿಚಾರದಲ್ಲಿ ಎಲ್ಲಾರು ಕೈಜೋಡಿಸಬೇಕು. ಜತೆಜತೆಗೆ ದೇಶ ಕಟ್ಟುವ ಕೆಲಸಕ್ಕೆ ಅಡಚಣೆಯಾದವರನ್ನು ಹತ್ತಿಕ್ಕುವ ಕೆಲಸವು ನಡೆಯುತ್ತಿದೆ. ಮತ್ಸ್ಯ ಉದ್ಯಮ ಲಾಭದಾಯಕವಾಗಿದ್ದು ಮುಂದಿನ ದಿನದಲ್ಲಿ ಕರಾವಳಿಯಲ್ಲಿ ಇನ್ನಷ್ಟು ಮತ್ಸ್ಯ ಉದ್ಯಮಕ್ಕೆ ಉತ್ತೇಜನ ಕೊಡಬೇಕಾಗಿದೆ. ಈ ತರಬೇತಿ ಶಿಬಿರ ಕೇವಲ ವಿಚಾರಕ್ಕೆ ಸೀಮಿತವಾಗದೆ ಅನುಷ್ಠಾನಕ್ಕೆ ಬರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಕರ್ನಾಟಕ ದಕ್ಷಿಣ ಪ್ರಾಂತ ಗೋಸೇವಾ ಪ್ರಮುಖ್ ಪ್ರವೀಣ್ ಸರಳಾಯ, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ತಾಲ್ಲೂಕು ಉಪಾಧ್ಯಕ್ಷೆ ಪುಷ್ಪ ಮೇದಪ್ಪ, ರಾಷ್ಟ್ರೀಯ ಸ್ವಯಂ ಸಂಘ ಚಾಲಕ ಚಂದ್ರಶೇಖರ ತಳೂರು, ಪುತ್ತೂರು ವಿವೇಕಾನಂದ ವಿದ್ಯಾಲಯದ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ,ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸಂಚಾಲಕ ಕೆ.ಆರ್.ಗಂಗಾಧರ್, ಗ್ರಾಮ ವಿಕಾಸ ಸಮಿತಿ ಮಂಗಳೂರು ಸಂಯೋಜಕ ವಿನೋದ್ ಬೋಳ್ಮಲೆ, ಸುಳ್ಯ ತಾಲ್ಲೂಕು ಸಹಕಾರಿ ಭಾರತಿ ಅಧ್ಯಕ್ಷ ಪ್ರವೀಣ್, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಮುಖ್ಯ ಶಿಕ್ಷಕ ಸೀತಾರಾಮ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಮಾಜಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಸ್ವಾಗತಿಸಿ, ಉಮಾಶಂಕರ್ ವಂದಿಸಿ ಅರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್.ಜಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.