ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ ಜಾನುವಾರು ಸಾಗಾಣಿಕೆಗೆ ದೃಢೀಕರಣ ಪತ್ರ ಕೊಡಲಾಗಿದೆ ಎಂದು ಆರೋಪಿಸಲಾಗಿತ್ತು. 3 ವರ್ಷದ ಹಿಂದಿನ ದಾಖಲೆಯ ತಿದ್ದುಪಡಿ ಮಾಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಡಾ. ದೇವಿಪ್ರಸಾದ್ ಕಾನತ್ತೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇದೀಗ ಈ ಅಮಾನತು ಆದೇಶವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಡಾ.ದೇವಿಪ್ರಸಾದ್ ಕಾನತ್ತೂರು ಅವರು ಪಂಜ ಪರಿವಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ ಉತ್ತಮ ಸಮಾಜಮುಖಿ ಕೆಲಸಕಾರ್ಯಗಳನ್ನು ನಡೆಸಿ ಜನ ಮೆಚ್ಚುಗೆ ಗಳಿಸಿದ್ದರು.