
ತೋಟಗಾರಿಕಾ ಇಲಾಖೆ ಸುಳ್ಯ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಂತೋಡು ಇದರ ಸಹಯೋಗದೊಂದಿಗೆ ಮಧುವನ ಹಾಗೂ ಜೇನು ಸಾಕಾಣಿಕಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಜೇನು ಕೃಷಿ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ ಅರಂತೋಡು ಸಹಕಾರಿ ಸಂಘದ ಸಿರಿಸೌಧ ಸಭಾಭವನದಲ್ಲಿ ಅ.21 ನಡೆಯಿತು.
ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ತೋಟಗಾರಿಕಾ ಇಲಾಖೆಯ ಅಧಿಕಾರಿ ಶ್ರೀಮತಿ ಸುಹಾನ, ತರಬೇತುದಾರಾದ ರಾಧಾಕೃಷ್ಣ ಭಟ್, ಕೀರ್ತನ್ ಶೇಣಿ, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಎಲ್ಲಾ ನಿರ್ದೇಶಕರು ಮತ್ತು ತರಬೇತುದಾರರು ಉಪಸ್ಥಿತರಿದ್ದರು.ಇಂದು ಜೇನು ಕೃಷಿಯ ಬಗ್ಗೆ ಪರಿಚಯ ಮಾಡಿಕೊಡಲಾಯಿತು.