
ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಸಭೆ ಸೋಮಶೇಖರ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಸಂಪಾಜೆ ಸೊಸೈಟಿ ಸಭಾಂಗಣದಲ್ಲಿ ನಡೆಯಿತು . ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರಾಗಿ ನೇಮಕವಾದ ಶವಾದ್ ಗೂನಡ್ಕ ರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ಕುಂಞ ಗೂನಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿ ಜಗದೀಶ್ ರೈ, ಮಾಜಿ ಅಧ್ಯಕ್ಷ ಯಮುನಾ, ಸುಂದರಿ ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷ ಸಂಘಟನೆ, ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು. 5 ವಾರ್ಡ್ ಗಳಿಗೆ ಸಮಿತಿ ನೇಮಕ ಮಾಡಲಾಯಿತು. ಸಭೆಯಲ್ಲಿ ಹಲವು ಸಾರ್ವಜನಿಕ ಸಮಸ್ಯೆ ಬಗ್ಗೆ ಚರ್ಚಿಸಲಾಯಿತು , ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮಾಜಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸೊಸೈಟಿ ನಿರ್ದೇಶಕರು ಹಾಜರಿದ್ದರು. ಹಮೀದ್ ಜಿ.ಕೆ.ಸ್ವಾಗತಿಸಿ ಅಬೂಸಾಲಿ ವಂದಿಸಿದರು.