ಯುವ ಬ್ರಿಗೇಡ್ ಸೇರಿದಂತೆ 5 ಸಂಘ ಸಂಸ್ಥೆಗಳಿಗೆ ಹಾಗೂ 65 ಸಾಧಕರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುವ ಈ ಪ್ರಶಸ್ತಿಯನ್ನು ನ. 7 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರ ದಲ್ಲಿ ಪ್ರಧಾನ ಮಾಡಲಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಸಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಗೂ ಸಹ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಯುವಬ್ರಿಗೇಡ್ ಗೊಲಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಯುವ ಬ್ರಿಗೇಡ್ ಸಂಘಟಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ವರ್ಷ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಪುಣ್ಯಕ್ಷೇತ್ರದ ನದಿಗಳ ಸ್ವಚ್ಛತಾ ಕಾರ್ಯ ಕೈಗೊಂಡಿತ್ತು. ಈ ಉತ್ತಮ ರಾಜ್ಯಾದ್ಯಂತ ಮೆಚ್ಚುಗೆ ಗಳಿಸಿತ್ತು. ಅಲ್ಲದೇ ವಿವಿಧ ಕಡೆಗಳಲ್ಲಿ ಸ್ವಚ್ಛತಾ ಅಭಿಯಾನ, ಬಡತನದಲ್ಲಿದ್ದು ಸೂರು ಇಲ್ಲದೇ ಸಂಕಟಪಡುತ್ತಿದ್ದ ನೂರಾರು ಜನರಿಗೆ ಬೆಳಕಾಗಿ ಕಂಡಿದ್ದರು. ಸಮಾಜಮುಖಿ ಕಾರ್ಯಕ್ರಮಗಳನ್ನು ಗುರುತಿಸಿದ ಸರ್ಕಾರ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.