
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈ ಬಿಟ್ಟಿರುವ ರಾಜ್ಯ ಸರಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
ಮೋಹನ್‌ರಾಮ್ ಸುಳ್ಳಿ, ಪಿ.ಜಿ.ಎಸ್.ಎನ್.ಪ್ರಸಾದ್, ಪ್ರಸನ್ನ ದರ್ಬೆ, ಕೃಷ್ಣ ಶೆಟ್ಟಿ ಕಡಬ, ಮತ್ತು ಶ್ರೀಮತಿ ವನಜಾ ವಿ. ಭಟ್ ಅಭಿವೃದ್ಧಿ ಸಮಿತಿ ಸದಸ್ಯರಾಗಿದ್ದಾರೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಕಾರ್ಯದರ್ಶಿಯಾಗಿರುತ್ತಾರೆ. ಸದಸ್ಯರಾಗಿರುವ ಮೋಹನ್‌ರಾಮ್ ಸುಳ್ಳಿಯವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.