
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿರುವ ಶ್ರೀನಿವಾಸ ಇಂದಾಜೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪತ್ರಕರ್ತರಾಗಿ ಹಾಗೂ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಗ್ರಾಮವಾಸ್ತವ್ಯದಂತಹ ಕಾರ್ಯಕ್ರಮದ ಮೂಲಕ ಸಮಾಜಮುಖಿ ಕಾರ್ಯಕ್ರಮ ಸಂಘಟಿಸಿ ಮೆಚ್ಚುಗೆ ಗಳಿಸಿದ್ದರು. ಸುಳ್ಯದ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು.