Ad Widget

ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸಲು ಪೊಲೀಸ್ ಮಹಾನಿರ್ದೇಶಕ ಕಚೇರಿಯಿಂದ ಆದೇಶ


ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕೆಂದು ಕೋರಿ ವಕೀಲ ಹರ್ಷ ಮುತಾಲಿಕ್ ಎಂಬವರು ಸಲ್ಲಿಸಿದ ಮನವಿಯನ್ನು ಉಲ್ಲೇಖಿಸಿ ಕ್ರಮಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.

. . . . . . . . .


ಆದೇಶದಲ್ಲಿ ಉಲ್ಲೇಖಿತ ಮನವಿಯನ್ನು ಲಗತ್ತಿಸಲಾಗಿದ್ದು, ಮನವಿಯಲ್ಲಿ ರಾಜ್ಯಾದ್ಯಂತ ಮುಸ್ಲಿಮ್ ಬಾಂಧವರು ಸಲ್ಲಿಸುವ ಪ್ರಾರ್ಥನೆಗಳಲ್ಲಿ ಹೆಚ್ಚು ಧ್ವನಿಯುಂಟಾಗುತ್ತಿದ್ದು, ಅವುಗಳಿಂದ ತೊಂದರೆಯುಂಟಾಗುತ್ತಿದ್ದು, ಈ ಬಗ್ಗೆ ಮಸೀದಿಗಳಿಂದ ಧ್ವನಿವರ್ಧಕವನ್ನು ತೆರವುಗೊಳಿಸಬೇಕೆಂದು ಆಕ್ಷೇಪಿಸಿರುತ್ತಾರೆ. ಆದ್ದರಿಂದ ಮಾಹಿತಿ ಮತ್ತು ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ.
ಈ ಆದೇಶದ ಕುರಿತು ತಾಲೂಕು ಕೇಂದ್ರಗಳಿಗೆ ಅತಿ ಶೀಘ್ರದಲ್ಲಿ ಆದೇಶ ಪತ್ರ ಬರಲಾಗುವುದು ಎಂದು ಮಾಹಿತಿ ತಿಳಿದು ಬಂದಿದೆ.
ಈ ಆದೇಶದ ಕುರಿತು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ಯಾವುದೇ ರೀತಿಯ ಅಧಿಕೃತ ಆದೇಶ ಬಂದಿಲ್ಲ. ಇಲಾಖೆ ಈ ಬಗ್ಗೆ ಕ್ರಮಕ್ಕೆ ಕೈಗೊಳ್ಳುತ್ತಿಲ್ಲ. ಇಲಾಖೆಯಲ್ಲಿನ ಕಾನೂನು ವಿಭಾಗದ ಅಭಿಪ್ರಾಯ ಪಡೆದ ಬಳಿಕವಷ್ಟೇ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!