ಕಳಂಜ : ಶಿಶು ಪ್ರದರ್ಶನ ಕಾರ್ಯಕ್ರಮ


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ಸುಳ್ಯ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ ಹಾಗೂ ಕಳಂಜ ಗ್ರಾಮ ಪಂಚಾಯತ್ ಇವುಗಳ ಆಶ್ರಯದಲ್ಲಿ “ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ” ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವು ನ.10 ರಂದು ಕಳಂಜ ವಿಷ್ಣುನಗರ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕಿಶೋರಿ ಸಂಘದ ಅಧ್ಯಕ್ಷೆ ಕು| ಮಧುಶ್ರೀ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಕಿಶೋರಿಯರು ಉದ್ಘಾಟಿಸಿದರು. ವೇದಿಕೆಯಲ್ಲಿ ಗ್ರಾಮ ವಿಕಾಸ ಸಂಯೋಜಕರಾದ ಶ್ರೀ ರವಿಪ್ರಸಾದ್ ರೈ ಕಳಂಜ, ಮಹಿಳಾ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ , ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಬೇಬಿ ಕೆ.ಸಿ ಉಪಸ್ಥಿತರಿದ್ದರು.
ಮಹಿಳಾ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ‘ಹೆಣ್ಣು ಮಕ್ಕಳನ್ನು ಉಳಿಸಿ ಹೆಣ್ಣು ಮಕ್ಕಳನ್ನು ಓದಿಸಿ’ ಕುರಿತಾಗಿ ಪ್ರಾಸ್ತಾವಿಕ ಮಾತುಗಳ ಜೊತೆಗೆ ಕಿಶೋರಿಯರಿಗೆ ಸರ್ವತೋಮುಖ ಬೆಳವಣಿಗೆ, ಬಾಲ್ಯವಿವಾಹ , ಪೋಕ್ಸೋಕಾಯಿದೆ ಬಗ್ಗೆ ಮಾಹಿತಿ ನೀಡಿದರು.
ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಬೇಬಿ ಕೆ.ಸಿ. ಪೌಷ್ಠಿಕ ಆಹಾರ, ಋತುಚಕ್ರ , ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ತಾಯಂದಿರಿಗೆ ಮತ್ತು ಆರೋಗ್ಯದಾಯಕ ಮಕ್ಕಳ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು. ಕೊರೊನಾ ಮುಕ್ತ ಮತ್ತು ಬಿ.ಬಿ.ಬಿ.ಪಿ. ಪ್ರಮಾಣವಚನ ಸ್ವೀಕರಿಸಲಾಯಿತು.
ಮಕ್ಕಳ ಪೋಷಕರು, ಕಿಶೋರಿಯರು ಸ್ತ್ರೀ ಶಕ್ತಿ ಮಹಿಳೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಆಶಾ ಕಾರ್ಯಕರ್ತೆಯರು, ಕೋಟೆಮುಂಡುಗಾರು ಅಂಗನವಾಡಿ ಕಾರ್ಯಕರ್ತೆ ಸಹಕರಿಸಿದರು. ವಿಷ್ಣುನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರಂಜಿತಾ ಸ್ವಾಗತಿಸಿ ,ಅಯ್ಯನಕಟ್ಟೆ ಅಂಗನವಾಡಿ ಕಾರ್ಯಕರ್ತೆ ಕು|ದೀಪ್ತಿ ವಂದಿಸಿದರು .ತಂಟೆಪ್ಪಾಡಿ ಅಂಗನವಾಡಿ ಕಾರ್ಯಕರ್ತೆ ಯಶೋಧ ಕಾರ್ಯಕ್ರಮ ನಿರೂಪಿಸಿದರು . ಕಾರ್ಯಕ್ರಮವನ್ನು ರಾಷ್ಟ್ರಗೀತೆಯೊಂದಿಗೆ‌ ಮುಕ್ತಾಯಗೊಳಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading