ಕೊರೋನಾದಿಂದಾಗಿ ಕಳೆದ 8 ತಿಂಗಳಿನಿಂದ ಕಾಲೇಜುಗಳು ಮುಚ್ಚಿದ್ದವು. ಆದರೆ ಇಂದಿನಿಂದ ಕಾಲೇಜುಗಳು ಪುನರಾರಂಭಗೊಂಡಿವೆ. ಸರ್ಕಾರ ಕಾಲೇಜುಗಳನ್ನು ಆರಂಭಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಷ್ಟೇ ಅಲ್ಲದೇ ಪ್ರತೀ ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿ ನೆಗೆಟಿವ್ ವರದಿ ಬಂದವರಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಲಾಗಿದೆ.
ರಾಜ್ಯದಾದ್ಯಂತ ಇವತ್ತಿನಿಂದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗಿದ್ದು, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯುತ್ತಿವೆ.
ರಾಜ್ಯದಾದ್ಯಂತ ಬರೋಬ್ಬರಿ 8 ತಿಂಗಳ ನಂತರ ಕಾಲೇಜುಗಳು ಆರಂಭವಾದ ಕಾರಣ ಹಲವು ವಿದ್ಯಾರ್ಥಿಗಳು ತರಗತಿಗಳಿಗೆ ಬರುವ ನಿರೀಕ್ಷೆಯಿತ್ತು. ಆದರೆ ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯೂ ಇಲ್ಲ. ಹಲವೆಡೆ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗಾಗಿ ಕಾದು ಕಾದು ನಂತರ ತರಗತಿಯಿಂದಲೇ ಆನ್ ಲೈನ್ ತರಗತಿ ಆರಂಭಿಸಿದ್ದಾರೆ.
✍ವರದಿ:-ಉಲ್ಲಾಸ್ ಕಜ್ಜೋಡಿ