ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2019-20 ನೇ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸಿದ ಸುಮಾರು 3000 ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಯಾರೂ ಅವರ ಗೋಜಿಗೆ ಹೋಗದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿವರ್ಷ ಕಾಲೇಜಿನ ಶೈಕ್ಷಣಿಕ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಪ್ರಾಂಶುಪಾಲರ , ಖಾಯಂ ಉಪನ್ಯಾಸಕರ ಮತ್ತು ಸಂಬಂಧಪಟ್ಟ ಅಧಿಕಾರಿ ವರ್ಗದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದು, ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣವಾಗುತ್ತಿರುವ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಜೀವನ ಇಂದು ಕೋವಿಡ್-19ರಿಂದ ಮೂಲೆಗುಂಪಾಗಿರುವುದು ನಿಜ. ಆದರೆ ಇವರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯಾವ ರಾಜಕೀಯ ವ್ಯಕ್ತಿಗಳೂ, ಯಾವುದೇ ರಾಜಕೀಯ ಪಕ್ಷಗಳ ರಾಜಕೀಯ ವ್ಯಕ್ತಿಗಳೂ, ಅಧಿಕಾರಿ ವರ್ಗದವರು ಆಸಕ್ತಿ ವಹಿಸದೆ ಇರುವುದು ಮಾತ್ರ ವಿಪರ್ಯಾಸವೇ ಸರಿ. ಇವರ ಸಮಸ್ಯೆಗಳಿಗೆ ಇನ್ನಾದರೂ ಸಂಬಂಧಪಟ್ಟ ವ್ಯಕ್ತಿಗಳು, ಮುಖ್ಯಮಂತ್ರಿಗಳು, ಆಡಳಿತ ಪಕ್ಷದ ಶಾಸಕರುಗಳು, ಶಿಕ್ಷಣ ಸಚಿವರು ಸಮರ್ಪಕವಾಗಿ ಪರಿಹಾರ ನೀಡುವುದು ಅಗತ್ಯವಿದೆ.
📝ರಂಜಿತ್ ಅಂಬೆಕಲ್ಲು